ಭದ್ರಾ ಅಣೆಕಟ್ಟು (Bhadra Dam) ಚಿಕ್ಕಮಗಳೂರು ಜಿಲ್ಲೆಯ ತಾರಿ ಕೆರೆ ತಾಲೂಕಿನ ಲಕ್ಕವಳ್ಳಿ ಬಳಿ ಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಅಣೆಕಟ್ಟಾಗಿದೆ. ಸರ್ ಎಂ. ವಿಶ್ವೇಶ್ವರಯ್ಯ ಅವರ ಮುನ್ನೋಟದಂತೆ ಯೋಜನೆ ಸಿದ್ಧಪಡಿಸಿ, 1965 ರಲ್ಲಿ ಪೂರ್ಣಗೊಳಿಸಲಾಯಿತು.
ಈ ಜಲಾಶಯದಿಂದ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಕೃಷಿ ಭೂಮಿಗೆ ನೀರಾವರಿ ಒದಗಿಸಲಾಗುತ್ತದೆ.